ಚಳ್ಳಕೆರೆ:-ನಾಯಕನಹಟ್ಟಿ ಹೋಬಳಿಯ ತಿಮ್ಮಪ್ಪಯ್ಯನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗಜ್ಜುಗಾನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಶ್ರೀ ಬಸವೇಶ್ವರ ಸ್ವಾಮಿ ರಥೋತ್ಸವ ನೂರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆಯಿತು. ಗಜ್ಜುಗಾನಹಳ್ಳಿ ಗ್ರಾಮದ ಕೊಟ್ಟಿಗೆ ತಿಮ್ಮಾರೆಡ್ಡಿ ರವರ ಮನೆಯಿಂದ ಶ್ರೀ ಬಸವೇಶ್ವರ ಸ್ವಾಮಿ ರಥೋತ್ಸವದ ಗಾಲಿಗೆ ಮಾಡಿಸಿದ ಭಕ್ತರು ಎಡೆ ಅರ್ಪಿಸಿದರು. 2:30 ಕ್ಕೆ ಪಲ್ಲಕ್ಕಿಯಲ್ಲಿ ಉತ್ಸವ ಮೂರ್ತಿಯನ್ನು ಹೊತ್ತು ತಂದ ಭಕ್ತರು ಮೂರು ಸುತ್ತು ಪ್ರದಕ್ಷಿಣೆ ಹಾಕಿ ರಥದಲ್ಲಿ ಪ್ರತಿಷ್ಠಾಪಿಸಿದರು ನಂತರ ಮುಕ್ತಿ ಬಾವುಟ ಹರಾಜು ಪ್ರಕ್ರಿಯೆ ನಡೆಯಿತು.