ಸಿದ್ಧಾಪುರ: ಪಟ್ಟಣದ ನೆಹರೂ ಮೈದಾನದಲ್ಲಿ ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ಶಾಸಕ ಭೀಮಣ್ಣ ಚಾಲನೆ
ಸಿದ್ದಾಪುರ: ಜಿಲ್ಲಾಡಳಿತ, ಜಿಪಂ, ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಸಂಯುಕ್ತಾಶ್ರಯದಲ್ಲಿ ಸಿದ್ದಾಪುರದ ನೆಹರೂ ಮೈದಾನದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಬೆಳಗಾವಿ ವಿಭಾಗ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ವಾಲಿಬಾಲ್ ಪಂದ್ಯಾವಳಿಗೆ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಸೋಮವಾರ ಸಂಜೆ ಚಾಲನೆ ನೀಡಿದರು. ವಾಲಿಬಾಲ್ ಚಿಮ್ಮುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಶಾಸಕ ಭೀಮಣ್ಣ ನಾಯ್ಕ ಮಾತನಾಡಿ, ಬೆಳಗಾವಿ ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾವಳಿಯಿಂದ ಸಿದ್ದಾಪುರದಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ಶಿಕ್ಷಣದಂತೆ ಕ್ರೀಡೆಗೂ ಹೆಚ್ಚಿನ ಆದ್ಯತೆ ನೀಡಬೇಕು. ನೀವು ಇಷ್ಟಪಟ್ಟ ಕ್ರೀಡೆಯಲ್ಲಿ ಶ್ರದ್ಧೆಯಿಂದ ಪಾಲ್ಗೊಂಡು ನಿಮ್ಮ ಗುರಿ ತಲುಪಿರಿ ಎಂದರ