ಮಸ್ಕಿ: ಸುಲ್ತಾನಪೂರದ ಡಾ.ಬಿ.ಆರ್. ಅಂಬೇಡ್ಕರ್ ನಗರದ ದಲಿತ ಕಾಲೊನಿಗೆ ಕುಡಿಯುವ ನೀರು ಒದಗಿಸುವಂತೆ ಕನ್ನಾಳ ಗ್ರಾ.ಪಂಗೆ ಮನವಿ
Maski, Raichur | Apr 2, 2024 ಕನ್ನಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಸುಲ್ತಾನಪೂರ ಗ್ರಾಮದ ಡಾ.ಬಿ.ಆರ್. ಅಂಬೇಡ್ಕರ್ ನಗರದ ದಲಿತ ಕಾಲೊನಿಗೆ ಕುಡಿಯುವ ನೀರು ಒದಗಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಇಂದು ಮನವಿ ಗ್ರಾ.ಪಂಗೆ ಸಲ್ಲಿಸಿದೆ. ಸುಲ್ತಾನಪುರ ಗ್ರಾಮದಲ್ಲಿ ಕುಡಿಯುವ ನೀರಿಗೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ . ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರು ಯಾವುದೇ ಪ್ರಯೋಜನವಾಗಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಲಾಯಿತು.