ಮಸ್ಕಿ: ಅಂಕುಶದೊಡ್ಡಿ ಗ್ರಾಮ ಪಂಚಾಯತಿಯಲ್ಲಿ ಮತದಾನ ಜಾಗೃತಿ ಅಭಿಯಾನ
Maski, Raichur | Mar 28, 2024 ಅಂಕುಶದೊಡ್ಡಿ ಗ್ರಾಮ ಪಂಚಾಯತಿ ಕಚೇರಿ ಮುಂದೆ ಲೋಕಸಭೆ ಚುನಾವಣೆ ನಿಮಿತ್ತ ರಂಗೋಲಿ ಸ್ಪರ್ಧೆ ಜರುಗಿತು. ಈ ವೇಳೆ ಮತದಾನ ಜಾಗೃತಿ ಅಭಿಯಾನಕ್ಕೆ ಸಹಾಯಕ ನಿರ್ದೇಶಕ (ಗ್ರಾಮೀಣ ಉದ್ಯೋಗ) ಶಿವಾನಂದರೆಡ್ಡಿ ಚಾಲನೆ ನೀಡಿ ಮಾತನಾಡಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಪ್ರಕ್ರಿಯೆ ಬಹುದೊಡ್ಡ ಹಬ್ಬವಾಗಿದ್ದು, ಮೇ 7ರಂದು ಜರುಗುವ ಮತದಾನ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬರು ಸಂವಿಧಾನ ಬದ್ಧವಾಗಿರುವ ಹಕ್ಕು ಚಲಾಯಿಸಬೇಕು. ಈ ಬಗ್ಗೆ ಜನ ಸಾಮಾನ್ಯರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಎಲ್ಲಾ ಗ್ರಾಪಂಗಳಲ್ಲಿ ನರೇಗಾ ಕಾಮಗಾರಿಗಳ ಸ್ಥಳ, ಸಂತೆ, ಜಾತ್ರೆ ಸೇರಿ ವಿವಿಧೆಡೆ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.