మంత్రాలయం: ರಾಯಚೂರು : ಮಂತ್ರಾಲಯದಲ್ಲಿ ಗೋಪೂಜೆ ಸಲ್ಲಿಸಿದ ಡಿಸಿಎಂ ಪತ್ನಿ
ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಆಲಯದಲ್ಲಿ ಮಠದ ವ್ಯಾಪ್ತಿಯಲ್ಲಿ ಬರುವಂತಹ ಗೋಶಾಲಗೆ ಡಿಕೆ ಶಿವಕುಮಾರ್ ಮತ್ತು ಪತ್ನಿ ಭೇಟಿ ನೀಡಿ ಅಲ್ಲಿ ವಿಶೇಷವಾಗಿ ಶ್ರೀಗಳ ಸಾನಿಧ್ಯದಲ್ಲಿ ಗೋಪೂಜೆ ಸಲ್ಲಿಸಿದರು. ವಿವಿಧ ಕಾರ್ಯಕ್ರಮಗಳ ನಿಮಿತ್ಯ ಮಂತ್ರಾಲಯಕ್ಕೆ ಆಗಮಿಸಿದ್ದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶ್ರೀ ಮಠದ ಗೋಶಾಲೆಯಲ್ಲಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿಯ ದಿವ್ಯ ಸಾನ್ನಿಧ್ಯದಲ್ಲಿ ಗೋ ಪೂಜೆ ನೆರವೇರಿಸಿದರು.