ಬೆಂಗಳೂರು ದಕ್ಷಿಣ: ಪಶ್ಚಿಮ ನಗರ ಪಾಲಿಕೆ ಆಯುಕ್ತ ಡಾ. ರಾಜೇಂದ್ರ ಕೆ.ವಿ ಅವ್ರಿಂದ ಕೆಂಗೇರಿಯಲ್ಲಿ ರಸ್ತೆ, ಪಾದಚಾರಿ ಮಾರ್ಗ ಪರಿಶೀಲನೆ
ಬೆಂಗಳೂರಿನ ಪಶ್ಚಿಮ ನಗರ ಪಾಲಿಕೆ ಆಯುಕ್ತರಾದ ಡಾ. ರಾಜೇಂದ್ರ ಕೆ.ವಿ ರವರು ಇಂದು ಬೆಳಿಗ್ಗೆ ವಾರ್ಡ್ 159 ಕೆಂಗೇರಿ ವ್ಯಾಪ್ತಿಯ ಮಸ್ಟರಿಂಗ್ ಕೇಂದ್ರಕ್ಕೆ ಭೇಟಿ ನೀಡಿದರು. ಅವರು ವಾರ್ಡ್ ವ್ಯಾಪ್ತಿಯ ರಸ್ತೆಗಳು, ಪಾದಚಾರಿ ಮಾರ್ಗಗಳನ್ನು ಪರಿಶೀಲಿಸಿ ಸಂಬಂಧಿತ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.ತಪಾಸಣೆಯಲ್ಲಿ ಜಂಟಿ ಆಯುಕ್ತರಾದ ಆರತಿ ಆನಂದ್ ಹಾಗೂ ಸ್ಥಳೀಯ ಅಧಿಕಾರಿಗಳು ಸಹ ಹಾಜರಿದ್ದರು. ಈ ಸಂದರ್ಭದಲ್ಲಿ ಸಾರ್ವಜನಿಕರ ಸೌಲಭ್ಯಕ್ಕಾಗಿ ಶೀಘ್ರ ಕ್ರಮ ಕೈಗೊಳ್ಳಲು ಸೂಚಿಸಲಾಯಿತು.