ಕಿತ್ತೂರು: ಮಲಪ್ರಭಾ ಕಾರ್ಖಾನೆಯ ಪುನಶ್ಚೇತನದ ಕುರಿತು ಎಂಕೆ ಹುಬ್ಬಳ್ಳಿ ಪಟ್ಟಣದಲ್ಲಿ ಚರ್ಚೆ ನಡೆಸಿದ ನೂತನ ನಿರ್ದೇಶಕರು
ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ. ಹುಬ್ಬಳ್ಳಿಯ ಶ್ರೀ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಗೆ ನೂತನವಾಗಿ ಆಯ್ಕೆಯಾದ ಪ್ಯಾನಲ್ನ ನಿರ್ದೇಶಕರು ಇಂದು ಮಂಗಳವಾರ 2 ಗಂಟೆಗೆ ಸಭೆ ಸೇರಿ ಕಾರ್ಖಾನೆಯ ಪ್ರಸ್ತುತ ಸ್ಥಿತಿಗತಿ ಹಾಗೂ ಪುನಶ್ಚೇತನ ಕುರಿತು ಚರ್ಚೆ ನಡೆಸಿದರು ನೂತನ ನಿರ್ದೇಶಕರೂ ಆಗಿರುವ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ನೇತೃತ್ವದಲ್ಲಿ ಸಭೆ ನಡೆಯಿತು ಕಾರ್ಖಾನೆಯ ಎಲ್ಲ ವಿಭಾಗಗಳಿಗೆ ತೆರಳಿ ಪ್ರಸ್ತುತ ಸ್ಥಿತಿಗತಿಗಳ ಕುರಿತು ಪರಿಶೀಲನೆ ನಡೆಸಿದರು ಮುಂದಿನ ಹಂಗಾಮಿಗೆ ಸಂಬಂಧಿಸಿದಂತೆ ಸಮಗ್ರ ಸಿದ್ಧತೆಗಳ ಕುರಿತು ಪೂರ್ವಭಾವಿ ಸಭೆ ನಡೆಸಿ, ಕಾರ್ಖಾನೆಯ ಪುನಶ್ಚೇತನದ ಕುರಿತು ಚರ್ಚಿಸಿದರು.