ಭಾರತೀಯ ಜನತಾ ಪಾರ್ಟಿ ಹು.ಧಾ ಮಹಾನಗರ ಜಿಲ್ಲಾ ಎಸ್.ಸಿ.ಮೋರ್ಚಾ ವತಿಯಿಂದ ಪಕ್ಷದ ಕಾರ್ಯಾಲಯದಲ್ಲಿ ಜರುಗಿದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿವಸ್ ಕಾರ್ಯಕ್ರಮವನ್ನುದ್ದೇಶಿಸಿ ಶಾಸಕರಾದ ಮಹೇಶ್ ಟೆಂಗಿನಕಾಯಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಮಾಜಿ ಶಾಸಕಾರಾದ ಅಶೋಕ ಕಾಟವೆ, ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷರಾದ ಲಿಂಗರಾಜ ಪಾಟೀಲ, ಜಿಲ್ಲಾ ಎಸ್.ಸಿ.ಮೋರ್ಚಾ ಅಧ್ಯಕ್ಷರಾದ ಹನುಮಂತ ಹರಿವಾಣ, ಪ್ರಮುಖರಾದ ಡಾ.ಕ್ರಾಂತಿ ಕಿರಣ, ರಾಜು ಕಾಳೆ, ಮಂಜುನಾಥ ಕಾಟಕರ ಸೇರಿದಂತೆ ಉಪಸ್ಥಿತರಿದ್ದರು.