ಹುನಗುಂದ: ಪ್ರವಾಸೋದ್ಯಮ ಬೆಳವಣಿಗೆಯಿಂದ ದೇಶದ ಅಭಿವೃದ್ದಿ, ಐಹೊಳೆಯಲ್ಲಿ ರಾಜ್ಯಸಭಾ ಸದಸ್ಯ ಭಾಂಡಗೆ
ಅನ್ಯ ರಾಷ್ಟ್ರಗಳಿಗೆ ಪೈಪೋಟಿ ನೀಡುವತ್ತ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬೆಳೆಯುತ್ತಿರುವ ಭಾರತವನ್ನು ವಿಶ್ವವೇ ನೋಡುತ್ತಿದ್ದು ಆ ನಿಟ್ಟಿನಲ್ಲಿ ಪ್ರವಾಸೋದ್ಯಮವೂ ಬೆಳೆಯಬೇಕಿದೆ ಎಂದು ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಹೇಳಿದರು.ಐತಿಹಾಸಿಕ ತಾಣ ಐಹೊಳೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ ಪ್ರವಾಸೋದ್ಯಮ ಮತ್ತು ಸುಸ್ಥಿರ ಪರಿವರ್ತನೆ ಸಂದೇಶ ಸಾರುವ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲೆಯ ಐತಿಹಾಸಿಕ ತಾಣಗಳನ್ನು ಜಗತ್ತಿನ ಇತಿಹಾಸದಲ್ಲಿ ಕಾಣುತ್ತಿದ್ದೇವೆ. ಆದರೆ ನಮ್ಮ ಪರಂಪರೆಯ ತಾಣಗಳನ್ನು ಬೆಳೆಸುವುದರಲ್ಲಿ ಹಿಂದೆ ಬಿದ್ದಿದ್ದೇವೆ. ಆ ನಿಟ್ಟಿನಲ್ಲಿ ಬೆಳವಣಿಗೆಗೆ ಎಲ್ಲರೂ ಕೈ ಜೋಡಿಸಬೇಕೆಂದರು.