ಸರ್ಕಾರಿ ನೌಕರಿ ಕನಸು ಕಟ್ಟಿಕೊಂಡು ಸಾವಿರಾರು ವಿದ್ಯಾರ್ಥಿಗಳು ಓದುತ್ತಿದ್ದು, ಅಂತಹ ವಿದ್ಯಾರ್ಥಿಗಳು ಈ ಶಿಬಿರದಲ್ಲಿ ಭಾಗವಹಿಸುವಂತೆ ಆಗಬೇಕು. ಹಾಗಾಗಿ ರಾಯಚೂರು ನಗರ ಸೇರಿದಂತೆ ಜಿಲ್ಲೆಯ ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ವಸತಿ ನಿಲಯಪಾಲಕರ ಮೂಲಕ ಮಾಹಿತಿ ಒದಗಿಸಲು ಕ್ರಮ ವಹಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮತ್ತ ಬಿಸಿಎಂ ಇಲಾಖೆಯ ಅಧಿಕಾರಿಗಳಿಗೆ ಸಹಾಯಕ ಆಯುಕ್ತರಾದ ಗಜಾನನ ಬಾಳೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.