ಮೈಸೂರು: ದಸರಾ ಸ್ತಬ್ದ ಚಿತ್ರ ಸಮಿತಿ ಪೋಸ್ಟರ್ ಬಿಡುಗಡೆ ಮಾಡಿದ ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತ ರೆಡ್ಡಿ
Mysuru, Mysuru | Sep 30, 2025 ಮೈಸೂರು ಅರಮನೆ ಮಂಡಳಿ ಆವರಣದಲ್ಲಿ ದಸರಾ ಸ್ತಬ್ಧಚಿತ್ರ ಉಪಸಮಿತಿಯ ಪೋಸ್ಟರ್ ಅನ್ನು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಜಿಪಂ ಸಿಇಒ ಎಸ್. ಯುಕೇಶ್ ಕುಮಾರ್, ನಗರಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್, ಸಮಿತಿಯ ಅಧ್ಯಕ್ಷ ಪ್ರಶಾಂತ್, ಉಪ ವಿಶೇಷಾಧಿಕಾರಿ ಕೆ.ಬಿ. ಪ್ರಭುಸ್ವಾಮಿ, ಕಾರ್ಯದರ್ಶಿ ಸತ್ಯಮೂರ್ತಿ, ಕಾರ್ಯಾಧ್ಯಕ್ಷ ದೀಪಕ್, ಸುಬ್ರಹ್ಮಣ್ಯ, ಉಪಾಧ್ಯಕ್ಷರು, ಸದಸ್ಯರು ಹಾಜರಿದ್ದರು.