ಕಾರವಾರ: ಪ್ರೀತಿ ಹೆಸರಿನಲ್ಲಿ ಯುವತಿಗೆ ಕಿರುಕುಳ: ಮನಗೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ:ಕದ್ರಾದಲ್ಲಿ ಘಟನೆ
ಪ್ರೀತಿಯ ಹೆಸರಿನಲ್ಲಿ ನೀಡಲಾದ ಕಿರುಕುಳಕ್ಕೆ ಬೇಸತ್ತು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಕಾರವಾರ ತಾಲೂಕಿನ ಕದ್ರಾ ಗ್ರಾಮದಲ್ಲಿ ನಡೆದಿದೆ. ಕದ್ರಾ ಗ್ರಾಮ ಪಂಚಾಯತ್ ಸದಸ್ಯೆಯ ಪುತ್ರಿಯಾದ 21 ವರ್ಷದ ರಿಶೇಲ್ ಡಿಸೋಜಾ ಕೆಪಿಸಿ ಕಾಲೋನಿಯ ತನ್ನ ಮನೆಯ ಬೆಡ್ರೂಮ್ನಲ್ಲಿ ಫ್ಯಾನ್ಗೆ ಸೀರೆ ಕಟ್ಟಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಬಗ್ಗೆ ಕದ್ರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಬಗ್ಗೆ ಶನಿವಾರ ಸಂಜೆ 12.30ಕ್ಕೆ ಪ್ರಕರಣ ದಾಖಲಾಗಿರುವ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ.