ಸಿರವಾರ: ಪಟ್ಟಣದಲ್ಲಿ ಜೆಸಿಬಿ ಘರ್ಜನೆ ಅನಧಿಕೃತ ಮಳಿಗೆಗಳ ತೆರವು ಕಾರ್ಯಾಚರಣೆ
Sirwar, Raichur | Nov 12, 2025 ಬೆಳ್ಳಂ ಬೆಳಗ್ಗೆ ಜಿಲ್ಲೆಯಲ್ಲಿ ಜೆಸಿಬಿ ಘರ್ಜನೆ ಮಾಡಿದ್ದು, ಅನಧಿಕೃತ ಮಳಿಗೆಗಳ ತೆರವು ಕಾರ್ಯಾಚರಣೆ ಮಾಡಿದೆ. ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ತೆರವು ಕಾರ್ಯಾಚರಣೆ ಮಾಡಲಾಯಿತು. ಬುಧವಾರ ಬೆಳಿಗ್ಗೆ 8.30 ನಿಮಿಷಕ್ಕೆ ರಸ್ತೆ ಮೇಲೆ, ಫುಡ್ಪಾತ್ ಮೇಲೆ ಹಾಕಲಾಗಿದ್ದ ಅಂಗಡಿ ಮುಂಗಟ್ಟುಗಳನ್ನು, ಪೊಲೀಸ್ ಸಿಬ್ಬಂದಿಗಳ ನೆರವಿನಿಂದ ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ ಮಾಡಲಾಯಿತು. ಅಂಗಡಿಯಲ್ಲಿದ್ದ ವಸ್ತುಗಳು ಸಹ ಕಾರ್ಯಾಚರಣೆ ವೇಳೆ ಸಂಪೂರ್ಣ ನಾಶವಾಗಿವೆ. ಈ ವೇಳೆ ಕಾರ್ಯಾಚರಣೆ ವಿರುದ್ಧ ಸ್ಥಳೀಯರ ಆಕ್ರೋಶ ಹೊರಹಾಕಿದ್ದಾರೆ.