ಕಾರ್ಮಿಕರು ಸರ್ಕಾರದಿಂದ ಬರುವ ಸವಲತ್ತುಗಳನ್ನು ಸರಿಯಾಗಿ ಬಳಸಿಕೊಂಡು ಬದುಕನ್ನು ಉತ್ತಮವಾಗಿ ಕಟ್ಟಿಕೊಳ್ಳಬೇಕೆಂದು ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ, ರಾಯಚೂರು ಗ್ರಾಮಾಂತರ ಶಾಸಕರಾದ ಬಸನಗೌಡ ದದ್ದಲ್ ಹೇಳಿದರು. ಭಾನುವಾರ 11 ಗಂಟೆಗೆ ಶಾಸಕರ ಕಚೇರಿಯಲ್ಲಿ ಗ್ರಾಮೀಣ ಕ್ಷೇತ್ರಕ್ಕೆ ಒಳಪಡುವ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಅರ್ಹ ಕಟ್ಟಡ ಮತ್ತು ಇತರೆ ನಿರ್ಮಾಣ ಕೆಲಸದ ಕಾರ್ಮಿಕರಿಗೆ ವಿವಿಧ ಬಗೆಯ ಕಾರ್ಮಿಕರ ಸುರಕ್ಷತಾ ಕಿಟ್ ಗಳನ್ನು ವಿತರಿಸಿ ಅವರು ಮಾತನಾಡಿದರು.