ಹನೂರು: ಮಹಾಲಯ ಅಮಾವಾಸ್ಯೆ ಹಿನ್ನೆಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರ ಸಂಖ್ಯೆ ಹೆಚ್ಚಳ ಸರತಿ ಸಾಲುಗಟ್ಟಿ ನಿಂತ ವಾಹನಗಳು
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪ್ರಸಿದ್ಧ ಯಾತ್ರ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟದ ರಸ್ತೆ ಟ್ರಾಫಿಕ್ ಜಾಮ್ ಉಂಟಾಗಿ ಆನೆ ತಲೆದಿಂಬಿನ ಬಳಿ ಬಸ್ ಗಳು ಹಾಗೂ ಇತರೆ ವಾಹನಗಳು ಸರತಿ ಸಾಲಿನಲ್ಲಿ ನಿಂತು ಪ್ರಯಾಣಿಕರು ಹೈರಾಣದರು. ಇಂದು ಮಹಾಲಯ ಅಮಾವಾಸ್ಯೆ ಹಿನ್ನೆಲೆ ಮಾದಪ್ಪನ ಬೆಟ್ಟಕ್ಕೆ ಭಕ್ತರ ಸಂಖ್ಯೆ ಹೆಚ್ಚಾಗ ಹಿನ್ನೆಲೆ ಸುತ್ತಿನಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು