ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳ ವಾರ್ಡ್‌ವಾರು ಕರಡು ಮತದಾರರ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗದ ಆಯುಕ್ತರಾದ ಜಿ.ಎಸ್. ಸಂಗ್ರೇಶಿ ಹಾಗೂ ಜಿಬಿಎ ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಆರ್. ರಾಮಚಂದ್ರನ್ ಅವರು ಬಿಡುಗಡೆ ಮಾಡಿದರು. ಈ ಸಭೆಯಲ್ಲಿ ನಗರ ಪಾಲಿಕೆಗಳ ಆಯುಕ್ತರು, ಚುನಾವಣಾ ವಿಭಾಗದ ಅಧಿಕಾರಿಗಳು, ತಹಸೀಲ್ದಾರ್‌ಗಳು, ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಸೇರಿದಂತೆ ಇತರ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.