ಶಿವಮೊಗ್ಗ: ವಿಐಎಸ್‌ಎಲ್ ಕಾರ್ಖಾನೆ ಉಳಿಸಲು ಚಿಂತನೆ: ಸೋಗಾನೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆ ಉಳಿಸಿಕೊಡಲು ಚಿಂತನೆ ನಡೆಸುತ್ತೇನೆ ಎಂದು ಶಿವಮೊಗ್ಗದ ಸೋಗಾನೆ ವಿಮಾನ ನಿಲ್ದಾಣದಲ್ಲಿ ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆ ಉಳಿವಿಗಾಗಿ ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾಗಿದ್ದಂತಹ ಅಪ್ಪಾಜಿಗೌಡ ಅವರು ಸಾಕಷ್ಟು ಪ್ರಯತ್ನ ಮಾಡಿದ್ದಾರೆ.ಈ ಸಂಬಂಧ ಕಾರ್ಮಿಕರ ಮತ್ತು ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾಹಿತಿ ಪಡೆದಿದ್ದೇನೆ ವಿ ಐ ಎಸ್ ಎಲ್ ಕಾರ್ಖಾನೆ ಉಳಿಸಿಕೊಡಲು ಚಿಂತನೆ ನಡೆಸುತ್ತೇನೆ ಎಂದು ಹೇಳಿದ್ದಾರೆ.