ಹೊನ್ನಾವರ : ಪಟ್ಟಣದ ಹವ್ಯಕ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಜಿಲ್ಲಾಧ್ಯಕ್ಷರಾದ ಎನ್.ಎಸ್.ಹೆಗಡೆಯವರ ಸುಪುತ್ರಿಯ ವಿವಾಹ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕೀ ಬಾತ್ ಕಾರ್ಯಕ್ರಮದ ನೇರ ಪ್ರಸಾರದ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿರುವುದು ಎಲ್ಲರ ಗಮನ ಸೆಳೆಯಿತು. ಭಾನುವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮದ ನೇರ ಪ್ರಸಾರದ ವೀಕ್ಷಣೆಗೆ ವ್ಯವಸ್ಥೆಯನ್ನು ಮಾಡಲಾಗಿತ್ತು.