ಬಿಜೆಪಿ ಶಾಸಕರ ವಿರೋಧ ಲೆಕ್ಕಿಸದೇ ಭಗವಂತ ಖೂಬಾಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ಘೋಷಣೆ ಮಾಡಿದ್ದು, ನಗರದಲ್ಲಿ ಬೆಂಬಲಿಗರು ಸಂಭ್ರಮಾಚರಣೆ ಮಾಡಿದ್ದಾರೆ. ಬಿಜೆಪಿ ವರಿಷ್ಠರು ಕೇಂದ್ರ ರಾಸಾಯನಿಕ, ರಸಗೊಬ್ಬರ ಮತ್ತು ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಮೇಲೆ ಭರವಸೆ ಇಟ್ಟು ಮತ್ತೊಮ್ಮೆ ಟಿಕೆಟ್ ಘೋಷಣೆ ಮಾಡಿದ್ದಾರೆ. ಖೂಬಾಗೆ ಯಾವುದೇ ಕಾರಣಕ್ಕೂ ಟಿಕೆಟ್ ನೀಡಬಾರದು ಎಂದು ಸ್ವಪಕ್ಷೀಯ ಶಾಸಕ ಪ್ರಭು ಚೌವ್ಹಾಣ್, ಶರಣು ಸಲಗಾರ, ಮಾಜಿ ಶಾಸಕ ಸುಭಾಷ್ ಕಲ್ಲೂರು ಪಟ್ಟು ಹಿಡಿದಿದ್ದರು.