ಮಡಿಕೇರಿ: ಸೆ.16 ರಂದು ಶುಂಟಿಕೊಪ್ಪವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ
66/11ಕೆವಿ ಸುಂಟಿಕೊಪ್ಪ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ ಎಫ್1 ನಾಕೂರು ಫೀಡರ್ನಲ್ಲಿ ಮಾರ್ಗ ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ 11 ಕೆವಿ ಮಾರ್ಗಗಳಲ್ಲಿ ಸೆಪ್ಟೆಂಬರ್, 16 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಆದ್ದರಿಂದ ನಾಕೂರು ಶೀರಂಗಾಲ, ಹಾದ್ರೆ ಹೆರೂರು, ಅಂದಗೋವೆ, ಹೆರೂರು, ನಾಕೂರು, ಕಾನ್ಬೈಲು, ಕಲ್ಲೂರು, ಮಳ್ಳೂರು, ಮಂಜಿಕೆರೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.