ಹೆದ್ದಾರಿ ಪಕ್ಕದಲ್ಲೆ ಎಲೆಕ್ಟ್ರಿಕ್ ಬೈಕ್ ಗೆ ಬೆಂಕಿ ಹೊತ್ತಿಕೊಂಡಿರುವ ಘಟನೆ ನಡೆದಿದೆ. ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕುಂಬಾಪುರ ಗೇಟ್ ಬಳಿ ಭಾನುವಾರ ರಾತ್ರಿ ನಡೆದಿದೆ. ಮೈಸೂರಿನಿಂದ ಬೆಂಗಳೂರು ಕಡೆಗೆ ಸಂಚಾರ ಮಾಡುತ್ತಿದ್ದ ಬೈಕ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ತಕ್ಷಣ ಸವಾರ ರಸ್ತೆಯ ಪಕ್ಕಕ್ಕೆ ನಿಲ್ಲಿಸಿದ್ದಾನೆ. ನೋಡ ನೋಡುತ್ತಲೆ ಬೈಕ್ ಸಂಪೂರ್ಣ ಬೆಂಕಿಯ ಕೆನ್ನಾಲಿಗೆಗೆ ಆಹುತಿಯಾಗಿದೆ.