ಬಸವನ ಬಾಗೇವಾಡಿ: ಹಿಟ್ಟಿನಹಳ್ಳಿಯಲ್ಲಿ ಪ್ರಜಾ ಸೇವಾ ಆಂದೋಲನ ಉದ್ಘಾಟಿಸಿದ ಶಾಸಕ ವಿಟ್ಟಲ್ ಕಟಕದೊಂಡ
ವಿಜಯಪುರ ತಾಲೂಕಿನ ಹಿಟ್ಟಿನಹಳ್ಳಿ ಗ್ರಾಮದಲ್ಲಿ ನಡೆದ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮವನ್ನು ನಾಗಠಾಣ ಶಾಸಕ ವಿಟ್ಟಲ್ ಕಟಕದೊಂಡ ಉದ್ಘಾಟಿಸಿದರು. ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಮಾಡುವುದು ಮತ್ತು ಜನರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.