ಸಿದ್ಧಾಪುರ: ತಾಲೂಕಿನ ಹೆಗ್ಗರಣಿಯಲ್ಲಿ ಜರುಗಿದ ಸೇವಾ ಸಹಕಾರಿ ಸಂಘ ಹೆಗ್ಗರಣಿಯ ಅಮೃತ ಮಹೋತ್ಸವ ಕಾರ್ಯಕ್ರಮ
ಸಿದ್ದಾಪುರ : ತಾಲೂಕಿನ ಹೆಗ್ಗರಣಿಯ ಸೇವಾ ಸಹಕಾರಿ ಸಂಘದ ಅಮೃತ ಮಹೋತ್ಸವ ಕಾರ್ಯಕ್ರಮವು ಶುಕ್ರವಾರ ಸಂಘದ ಆವರಣದಲ್ಲಿ ಜರುಗಿರು. ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಶಾಸಕ ಶಿವರಾಮ ಹೆಬ್ಬಾರ್ ಮತ್ತು ಶಾಸಕ ಭೀಮಣ್ಣ ನಾಯ್ಕ ಕಾರ್ಯಕ್ರಮದಲ್ಲಿ ಭಾಗಿಯಾಗಿ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಹೆಬ್ಬಾರ್, ಸೇವಾ ಸಹಕಾರಿ ಸಂಘಗಳು ರೈತರ ಬೆನ್ನೆಲುಬು ಎಂದು ಬಣ್ಣಿಸಿದರು. ಇದೇ ವೇಳೆ ಸಂಘದ ಹಿತಾಸಕ್ತಿಕಾಗಿ ಪ್ರಾಮಾಣಿಕವಾಗಿ ದುಡಿದವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಟಿ.ಎಸ್.ಎಸ್ ಅಧ್ಯಕ್ಷರಾದ ಗೋಪಾಲಕೃಷ್ಣ ವೈದ್ಯ ಸೇರಿದಂತೆ ಕೆ.ಡಿ.ಸಿ.ಸಿ ಬ್ಯಾಂಕ್ ನಿರ್ದೇಕರು ಇದ್ದರು.