ಬಳ್ಳಾರಿ: ಜೂನ್ 25ರಿಂದ ಕಾಲುವೆಗಳಿಗೆ ನೀರು ಹರಿಸಿ ; ನಗರದಲ್ಲಿ ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷ ಮಾಧವರೆಡ್ಡಿ
ತುಂಗಾಭದ್ರ ಜಲಾಶಯದಿಂದ ಇದೇ ಜೂನ್ 25ರಿಂದ ಮೂರು ಕಾಲುವೆಗಳಿಗೆ ನೀರು ಹರಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷರಾದ ಆರ್. ಮಾಧವರೆಡ್ಡಿ ಕರೂರು ಒತ್ತಾಯ ಮಾಡಿದ್ದಾರೆ. ಬಳ್ಳಾರಿ ನಗರದ ಮುಂಡ್ಲೂರು ರಾಮಪ್ಪ ಸಭಾಂಗಣದಲ್ಲಿ ಶುಕ್ರವಾರ ಮಧ್ಯಾಹ್ನ 12ಗಂಟೆಗೆ ಸುದ್ದಿಗಾರರೊಂದಿಗೆ ಮಾತನಾಡಿದರು. ಪ್ರಸಕ್ತ ವರ್ಷ ಜಲಾಶಯಕ್ಕೆ 30 ಟಿಎಂಸಿ ನೀರು ಹರಿದು ಬಂದಿದೆ. ಕೂಡಲೇ ನೀರಾವರಿ ಸಲಹಾ ಸಮಿತಿ ಸಭೆ ಕರೆದು ನೀರು ಬಿಡುವ ಕುರಿತು ನಿರ್ಧಾರ ಮಾಡಬೇಕು ಎಂದರು. ಕಳೆದ ವರ್ಷ ಜಲಾಶಯದ 19ನೇ ಗೇಟ್ ಕಳಚಿ ಹೊಗಿತ್ತು. ತಜ್ಞರು ಕೂಡ ಕ್ರಸ್ಟ್ ಗೇಟ್ ಅಳವಡಿಸುವ ಕುರಿತು ಅಧ್ಯಯನ ನಡೆಸಿದ್ದಾರೆ. ಜಲಾಶಯದ ಎಲ್ಲಾ ಗೇಟ್ ಹೊಸದಾಗಿ ನಿರ್ಮಿಸಬೇಕು ಎಂದು ಸೂಚನೆ ಕೊಟ್ಟಿದ್ದಾರೆ ಎಂದ್ರು..