ಬೆಂಗಳೂರು ಉತ್ತರ: ಗುಂಡಿ ಮುಚ್ಚುವ ಕೆಲಸ ಪ್ರಗತಿಯಲ್ಲಿದೆ,ಮುಖ್ಯಮಂತ್ರಿಗಳಿಂದ 750 ಕೋಟಿ ರೂ. ಅನುದಾನ; ಡಿಕೆ ಶಿವಕುಮಾರ್
ಬೆಂಗಳೂರಿನ ರಸ್ತೆ ಗುಂಡಿಗಳು ಬಿಜೆಪಿ ಸರಕಾರದ ದುರಾಡಳಿತದ ಫಲ. ರಸ್ತೆಗುಂಡಿಗಳನ್ನು ಮುಚ್ಚಲು ನಾವು ಬದ್ಧರಾಗಿದ್ದು, ಇದಕ್ಕಾಗಿಯೇ ಮುಖ್ಯಮಂತ್ರಿಗಳು 750 ಕೋಟಿ ರೂ. ಅನುದಾನ ನೀಡಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಗುರುವಾರ ರವೀಂದ್ರ ಕಲಾಕ್ಷೇತ್ರ ಆವರಣದಲ್ಲಿ ಖ್ಯಾತ ಸಾಹಿತಿ ಎಸ್ ಎಲ್ ಬೈರಪ್ಪನವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿ, ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯಿಸಿದರು. “ನಗರದಲ್ಲಿ ರಸ್ತೆಗುಂಡಿಗಳಿರುವುದು ನಿಜ. ಅವುಗಳನ್ನು ಮುಚ್ಚಲು ನಾವು ಕಾರ್ಯಪ್ರವೃತ್ತರಾಗಿದ್ದೇವೆ. ಎಲ್ಲೆಲ್ಲಿ ರಸ್ತೆಗುಂಡಿಗಳಿವೆ ಎಂದು ಮಾಹಿತಿ ನೀಡಿ ಎಂದು ಸಾರ್ವಜನಿಕರು, ಪೊಲೀಸರಿಗೆ ನಾನೇ ಮನವಿ ಮಾಡಿದ್ದೇನೆ. ಬಿಜೆಪಿ ಸರ್ಕಾರ ದುರಾಡಳಿತದ ಪರಿಣಾಮವಾಗಿ ಈ ಪರಿಸ್ಥಿತ