ಮಂಗಳೂರು: ಕೆಂಪು ಕಲ್ಲು ಮರಳು ಸಮಸ್ಯೆ: ಮಿನಿ ವಿಧಾನಸೌಧದ ಎದುರು ಬಿಜೆಪಿ ಪ್ರತಿಭಟನೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಸಮಸ್ಯೆಯನ್ನು ನಿವಾರಿಸಲು ರಾಜ್ಯ ಕಾಂಗ್ರೆಸ್ ಸರಕಾರದ ವೈಫಲ್ಯವಾಗಿದೆ ಎಂದು ಆರೋಪಿಸಿ ಬಿಜೆಪಿ ಪಕ್ಷದ ನೇತೃತ್ವದಲ್ಲಿ ಪ್ರತಿಭಟನಾ ಧರಣಿ ಮಂಗಳೂರು ಮಿನಿ ವಿಧಾನ ಸೌಧದ ಎದುರು ಇಂದು ನಡೆಯಿತು. ಈ ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕ ವೇದವ್ಯಾಸ ಕಾಮತ್ ಸೇರಿದಂತೆ ಜಿಲ್ಲೆಯ ಬಿಜೆಪಿ ನಾಯಕರು, ಕಾರ್ಯಕರ್ತರು ಭಾಗವಹಿಸಿದ್ದರು. ಇದೇ ವೇಳೆ 'ಬಾವಾ ಬಂದರೋ' ಹಾಡಿನ ಶೈಲಿಯಲ್ಲಿ 'ಗುಂಡೂರಾವ್ ಓಡಿ ಹೋದರು' ಎಂಬ ಹಾಸ್ಯಸ್ಯದ ಶೈಲಿಯಲ್ಲಿ ಹಾಡನ್ನು ಹಾಡಿ ವಿನೂತನವಾಗಿ ಪ್ರತಿಭಟಿಸಲಾಯಿತು.