ನವಲಗುಂದ: ನವಲಗುಂದದಲ್ಲಿ ಜನರ ಅಹವಾಲನ್ನು ಸ್ವೀಕರಿಸಿದ ಶಾಸಕ ಎನ್.ಎಚ್.ಕೋನರಡ್ಡಿ
ನವಲಗುಂದ ವಿಧಾನಸಭಾ ಮತಕ್ಷೇತ್ರ-69 ನವಲಗುಂದ ನಗರದ ಶಾಸಕರ ಜನಸಂಪರ್ಕ ಕಚೇರಿಯಲ್ಲಿ ಜನತಾದರ್ಶನದ ನಡೆಸಿ ಜನರ ಅಹವಾಲುಗಳನ್ನು ಶಾಸಕರಾದ ಎನ್.ಎಚ್.ಕೋನರಡ್ಡಿ ಅವರು ಸ್ವೀಕರಿಸಿದರು. ಕ್ಷೇತ್ರದ ವಿವಿಧ ಭಾಗಗಳಿಂದ ಬಂದಿದ್ದ ಜನರು ತಮ್ಮ ಕುಂದುಕೊರತೆಗಳನ್ನು ಸಲ್ಲಿಸಿದರು. ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಲಾಗಿದೆ. ಉಳಿದ ಸಮಸ್ಯೆಗಳಿಗೆ ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ಈ ವೇಳೆ ನವಲಗುಂದ ವಿಧಾನಸಭಾ ಕ್ಷೇತ್ರದ ಸಾರ್ವಜನಿಕರು ಉಪಸ್ಥಿತಿ ಇದ್ದರು.