ಧಾರವಾಡ: ವಿಶೇಷ ಚೇತನರು ಸಾಧನೆ ಮಾಡಿ ಇತರರಿಗೆ ಸ್ಪೂರ್ತಿಯಾಗಿದ್ದಾರೆ: ನಗರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪಣಾಧಿಕಾರಿ ಡಾ.ಕಮಲಾ
ವಿಶೇಷ ಚೇತನರು ಆತ್ಮವಿಶ್ವಾಸ ಮತ್ತು ಕಠಿಣ ಪರಿಶ್ರಮದ ಮೂಲಕ ಸಾಧನೆ ಮಾಡಿ ಇತರರಿಗೆ ಸ್ಪೂರ್ತಿಯಾಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪಣಾಧಿಕಾರಿ ಡಾ. ಕಮಲಾ ಬೈಲೂರ ಹೇಳಿದರು. ನಗರದ ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಮಧ್ಯಾಹ್ನ 3 ಗಂಟೆಗೆ ನಡೆದ ವಿಕಲಚೇತನರ ಕ್ರೀಡಾ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದ ಅವರು, ವಿಕಲಚೇತನರಿಗೆ ಅಗತ್ಯವಾದ ಸಹಾಯ, ಪ್ರೋತ್ಸಾಹ, ಸೌಲಭ್ಯಗಳನ್ನು ಒದಗಿಸುವು