ಹಾಸನ: ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ನಾಗರಿಕರಿಗಾಗಿ ವಿವಿಧ ಆಟೋಟ ಸ್ಪರ್ಧೆ
Hassan, Hassan | Sep 16, 2025 ಹಾಸನ:ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಅಂಗವಿಕಲ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಂಸ್ಥೆಗಳ ಸಹಭಾಗಿತ್ವದಲ್ಲಿಂದು ಹಿರಿಯ ನಾಗರಿಕರಿಗಾಗಿ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.ವಯಸ್ಕ ಮಹಿಳೆಯರು ಹಾಗೂ ಪುರುಷರು ವೇಗದ ನಡಿಗೆ, ಬಕೆಟ್ ನಲ್ಲಿ ಬಾಲ್ ಹಾಕುವುದು, ಮ್ಯೂಸಿಕಲ್ ಚೇರ್, ಏಕಪಾತ್ರಾಭಿನಯ, ಗಾಯನ ಸ್ಪರ್ಧೆ ಹೀಗೆ ವಿವಿಧ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ ಗಮನ ಸೆಳೆದರು. ಕಾರ್ಯಕ್ರಮ ಉದ್ದೇಶಿಸಿ ಜಿಲ್ಲಾ ಅಂಗವಿಕಲರ ಕಲ್ಯಾಣಾ ಧಿಕಾರಿ ಅನುಪಮ ಮಾತನಾಡಿ, ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಪೂರ್ವಭಾವಿಯಾಗಿ ಈ ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸಲಾಗಿದ್ದು, ಪುರುಷರು ಹಾಗೂ ಮಹಿಳೆಯರಿಗೆ ಪ್ರತ್ಯೇಕವಾಗಿ ಕ್ರೀಡಾ ಚಟುವಟಿ