ಪಾವಗಡ: ಭದ್ರಾ ಮೇಲ್ದಂಡೆ ನೀರು ಹರಿಸಲು ರೈತ ಸಂಘದ ಆಗ್ರಹ, ಹೋರಾಟದ ಎಚ್ಚರಿಕೆ
ಮಳೆ ಕೊರತೆಯಿಂದ ಕಂಗೆಟ್ಟಿರುವ ಪಾವಗಡ ರೈತರು, ಭದ್ರಾ ಮೇಲ್ದಂಡೆ, ಹೇಮಾವತಿ ಹಾಗೂ ಎತ್ತಿನಹೊಳೆ ನೀರನ್ನು ಹರಿಸುವಂತೆ ಒತ್ತಾಯಿಸಿದ್ದಾರೆ. ಜೊತೆಗೆ ಬೆಳೆ ನಷ್ಟ ಪರಿಹಾರ, ಸಾಲ ಮನ್ನಾ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರೈತ ಸಂಘ ಹಾಗೂ ಹಸಿರು ಸೇನೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.