ನಗರದಲ್ಲಿ ಬಿ.ಆರ್. ಅಂಬೇಡ್ಕರ ಅವರ 69ನೇ ಮಹಾಪರಿನಿರ್ವಾಣ ದಿನ ಆಚರಿಸಲಾಯಿತು. ಡಾ. ಬಿ.ಆರ್. ಅಂಬೇಡ್ಕರರ 69ನೇ ಮಹಾ ಪರಿನಿರ್ವಾಣ ದಿನದ ಹಿನ್ನೆಲೆ ಡಾ. ಅಂಬೇಡ್ಕರ್ ಉದ್ಯಾನದಲ್ಲಿ ಶನಿವಾರ ಮೇಯರ್ ಮಂಗೇಶ್ ಪವಾರ್, ಉಪ ಮೇಯರ್ ವಾಣಿ ಜೋಷಿ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಾದ ರಾಮನಗೌಡ ಕನ್ನೋಳ್ಳಿ ಇನ್ನುಳಿದವರು ಅಂಬೇಡ್ಕರ್ ಮೂರ್ತಿಗೆ ಮಾಲಾರ್ಪಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮೇಯರ್ ಮಂಗೇಶ್ ಪವಾರ್ ಅವರು. ಡಾ ಬಿ ಆರ್ ಅಂಬೇಡ್ಕರ್ ಅವರು ವಿಶ್ವವೇ ತಿರುಗಿ ನೋಡುವಂತೆ ನಮ್ಮ ದೇಶಕ್ಕೆ ಕೊಡುಗೆಯನ್ನು ನೀಡಿದ್ದಾರೆ ಎಂದು ಹೇಳಿದರು