ಕಲಬುರಗಿ : ರಸ್ತೆ ಬದಿ ನಿಂತಿದ್ದ ಕಬ್ಬು ತುಂಬಿದ ಟ್ರ್ಯಾಕ್ಟರ್ಗೆ ಹಿಂಬದಿಯಿಂದ ಕೆಕೆಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ, ಬಸ್ನಲ್ಲಿದ್ದ 30 ಜನ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾದ ಘಟನೆ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಸೊನ್ನ ಕ್ರಾಸ್ ಬಳಿ ಡಿಸೆಂಬರ್ 16 ರಂದು ರಾತ್ರಿ 7 ಗಂಟೆಗೆ ನಡೆದಿದೆ.. ಕಲಬುರಗಿಯಿಂದ ಸಿಂದಗಿ ಕಡೆ ಹೊರಟಿದ್ದ ಕೆಕೆಆರ್ಟಿಸಿ ವ ಬಸ್, ಸಿಂದಗಿ ಕಡೆ ಹೊರಟಿದ್ದ ಕಬ್ಬು ತುಂಬಿದ ಟ್ರ್ಯಾಕ್ಟರ್ಗೆ ಹಿಂಬದಿಯಿಂದ ಬಸ್ ಡಿಕ್ಕಿ ಹೊಡೆದ ಪರಿಣಾಮ, ಬಸ್ನಲ್ಲಿದ್ದ 30 ಜನ ಗಾಯಗೊಂಡು ಇಬ್ಬರ ಪರಿಸ್ಥಿತಿ ಚಿಂತಾಜನಕವಾಗಿದೆ.. ಗಾಯಾಳುಗಳನ್ನ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನೇಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ