ಸಿದ್ದಾಪುರ: ಸಿದ್ದಾಪುರ ತಾಲೂಕಿನ ನಿಲ್ಕುಂದ ಸಮೀಪದ ಓಜಿಮನೆಯಲ್ಲಿ ಆಕಸ್ಮಿಕವಾಗಿ ಬಾವಿಗೆ ಬಿದ್ದ ೫ ವರ್ಷದ ಗಂಡು ಚಿರತೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳೀಯರ ನೆರವಿನೊಂದಿಗೆ ಬಾವಿಯಿಂದ ಮೇಲಕ್ಕೆತ್ತಿ ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ. ಜಾನ್ಮನೆ ವಲಯಾರಣ್ಯಾಧಿಕಾರಿ ಉಷಾ ಕಬ್ಬೇರ ಹಾಗೂ ಸಿಬ್ಬಂದಿಗಳು ಹಾಗೂ ಸ್ಥಳೀಯರು ರಕ್ಷಣಾ ಕಾರ್ಯಾರಚಣೆಯಲ್ಲಿ ಇದ್ದರು.