ಹೊಸಕೋಟೆ: ಶಿವನಾಪುರ ಗ್ರಾಮದಲ್ಲಿರುವ ವಹ್ನಿಕುಲ ಕ್ಷತ್ರಿಯ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ವಹ್ನಿಕುಲ ಕ್ಷತ್ರಿಯ ಸಮಾಜದ ಪ್ರತಿಭಾ ಪುರಸ್ಕಾರ. ಹೊಸಕೋಟೆ ವಿಧಾನಸಭಾ ಕ್ಷೇತ್ರದ ನಂದಗುಡಿ ಹೋಬಳಿಯ ಶಿವನಾಪುರ ಗ್ರಾಮದ ಶ್ರೀ ಆದಿಶಕ್ತಿ ಮಹಾಸಂಸ್ಥಾನ ಮಠದ ವಹ್ನಿಕುಲ ಕ್ಷತ್ರಿಯರ ಗುರುಪೀಠ ಸಮುದಾಯ ಭವನದಲ್ಲಿ ನೆರವೇರಿದ ರಾಜ್ಯಮಟ್ಟದ ವಹ್ನಿಕುಲ ಕ್ಷತ್ರಿಯ ಜನಾಂಗದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದನೆಗಳನ್ನು ಸಲ್ಲಿಸಲಾಯಿತು. ಪರಮಪೂಜ್ಯರಾದ ಶ್ರೀ ಶ್ರೀ ಶ್ರೀ ಪ್ರಣವಾನಂದ ಮಹಾಸ್ವಾಮಿಗಳು, ಮಾಜಿ ಸಚಿವರಾದ ಶ್ರೀ ಅರವಿಂದ ಲಿಂಬಾವಳಿ ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.