ಕೃಷ್ಣರಾಜಪೇಟೆ: ಹೊಡಿಕೆಶೆಟ್ಟಹಳ್ಳಿ ಬಳಿ ಚಿರತೆ ಪ್ರತ್ಯಕ್ಷ, ಗ್ರಾಮಸ್ಥರಲ್ಲಿ ಆತಂಕ
ಕೆ. ಆರ್. ಪೇಟೆ ತಾಲೂಕಿನ ಹೊಡಿಕೆಶೆಟ್ಟಹಳ್ಳಿ ಬಳಿ ಚಿರತೆ ಪ್ರತ್ಯಕ್ಷ, ಗ್ರಾಮಸ್ಥರಲ್ಲಿ ಆತಂಕ ಕೆ.ಆರ್.ಪೇಟೆ ತಾಲೂಕಿನ ಹೊಡಿಕೆ ಶೆಟ್ಟಹಳ್ಳಿ ಬಳಿ ರಾತ್ರಿ ವೇಳೆ ರಸ್ತೆ ಬದಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಚಿರತೆಯ ಓಡಾಟದ ದೃಶ್ಯವನ್ನು ತಮ್ಮ ಮೊಬೈಲ್ನಲ್ಲಿ ಸೆರೆಹಿಡಿದಿದ್ದಾರೆ. ಚಿರತೆಯನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಯನ್ನು ಆಗ್ರಹಿಸಿದ್ದಾರೆ. ಇದರಿಂದಾಗಿ ತಾಲೂಕಿನ ಜನರು ರಾತ್ರಿ ವೇಳೆ ಸಂಚರಿಸಲು ಭಯಪಡುತ್ತಿದ್ದಾರೆಂದು ಸಾರ್ವಜನಿಕರು ಅರಣ್ಯ ಇಲಾಖೆಗೆ ಒತ್ತಾಯಿಸುತ್ತಿದ್ದಾರೆ. ಕೂಡಲೇ ಚಿರತೆಯನ್ನು ಸೆರೆ ಹಿಡಿಯುವಂತೆ ಆಗ್ರಹಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಈ ವಿಡಿಯೋ