ಚಾಮರಾಜನಗರ: ಜ್ಯೋತಿಗೌಡನಪುರದಲ್ಲಿ ಅಂಬೇಡ್ಕರ್, ಬುದ್ಧನಿಗೆ ಅಪಮಾನ ಸ್ಥಳಕ್ಕೆ ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ ಭೇಟಿ, ಪರಿಶೀಲನೆ
ಚಾಮರಾಜನಗರ ತಾಲೂಕಿನ ಜ್ಯೋತಿಗೌಡ ನಪುರದಲ್ಲಿ ಅಂಬೇಡ್ಕರ್ ಭಾವಚಿತ್ರವಿರುವ ಪ್ಲೆಕ್ಸ್ ಹಾಗೂ ಬುದ್ಧನ ವಿಗ್ರಹ ವಿರೂಪ ಗೊಳಿಸಿರುವ ಹಿನ್ನೆಲೆಯಲ್ಲಿ ಸ್ಥಳಕ್ಕೆ ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮಕ್ಕೆ ಭೇಟಿ ನೀಡಿದ ಐಜಿಪಿ ಬೋರಲಿಂಗಯ್ಯ ಅವರು ಘಟನಾ ಸ್ಥಳಗಳಿಗೆ ತೆರಳಿ ಪರಿಶೀಲಿಸಿದರು. ಅಲ್ಲದೇ ಘಟನೆ ಸಂಬಂಧ ಗ್ರಾಮಸ್ಥರಿಂದ ಮಾಹಿತಿ ಪಡೆದುಕೊಂಡರು. ಬಳಿಕ ಮಾತನಾಡಿದ ಅವರು, ಈ ಕೃತ್ಯ ನಡೆಸಿರುವ ಆರೋಪಿಗಳನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ಕ್ರಮವಹಿಸಲಾಗಿದೆ. ಆದ್ದರಿಂದ ಗ್ರಾಮಸ್ಥರು ಶಾಂತಿಯಿಂದ ಇರಬೇಕು ಎಂದು ಮನವಿ ಮಾಡಿದರು.