ಗುಂಡ್ಲುಪೇಟೆ: ಹಂಗಳ ಸಮೀಪ ಅಪರಿಚಿತ ವಾಹನ ಡಿಕ್ಕಿಯಾಗಿ ನರಿ ಸಾವು
ಅಪರಿಚಿತ ವಾಹನ ಡಿಕ್ಕಿಯಾಗಿ ನರಿಯೊಂದು ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಗುಂಡ್ಲುಪೇಟೆ-ಊಟಿ ರಾಷ್ಟ್ರೀಯ ಹೆದ್ದಾರಿ-766 ಹಾದುಹೋಗುವ ಹಂಗಳ ಗ್ರಾಮದಲ್ಲಿ ನಡೆದಿದೆ. ಹಂಗಳ ಗ್ರಾಮದ ಕೆರೆ ಬಳಿ ನರಿ ರಸ್ತೆ ದಾಟುತ್ತಿದ್ದ ವೇಳೆ ವೇಗದಿಂದ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ನರಿ ಸ್ಥಳದಲ್ಲೇ ಮೃತಪಟ್ಟಿದೆ. ಇದನ್ನು ಗಮನಿಸಿದ ಸ್ಥಳೀಯರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟ ಅರಣ್ಯ ವಲಯದಲ್ಲಿ ಈ ಅಪಘಾತ ನಡೆದಿದೆ.