ಸಾಗರ: ಸಾಗರ ನಗರಸಭೆ ಆಯುಕ್ತ ನಾಗಪ್ಪ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ವಿಡಿಯೋ ವೈರಲ್
Sagar, Shimoga | Nov 2, 2025 ಸಾಗರ ನಗರಸಭೆ ಆಯುಕ್ತ ನಾಗಪ್ಪನವರು ಬೀದಿ ಬದಿ ವ್ಯಾಪಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಭಾನುವಾರ ಈ ಕುರಿತಾದ ಮಾಹಿತಿ ಲಭ್ಯವಾಗಿದೆ. ಮಾಹಿತಿಯ ಪ್ರಕಾರ,ಶನಿವಾರ ರಾತ್ರಿ ಸಾಗರದ ರಾಣಿ ಚೆನ್ನಮ್ಮ ವೃತ್ತದ ಬಳಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ನಿಮಿತ್ತ ಸ್ಥಳ ಖಾಲಿ ಮಾಡಿಸುವ ವೇಳೆ ನಾಗಪ್ಪನವರು ಸ್ಥಳಕ್ಕೆ ಬಂದು ವ್ಯಾಪಾರಿಗಳಿಗೆ ಜಾಗ ತೆರವುಗೊಳಿಸಲು ಸೂಚಿಸಿದ್ದಾರೆ. ಈ ವೇಳೆ ಅವರು ಅಸಭ್ಯ ಹಾಗೂ ಅವಾಚ್ಯ ಶಬ್ದಗಳನ್ನು ಬಳಸಿ ಮಾತನಾಡಿರುವ ದೃಶ್ಯಗಳು ಕ್ಯಾಮೆರಾಗಳಲ್ಲಿ ಸೆರೆಯಾಗಿವೆ.ಈ ಘಟನೆಗೆ ಸಂಬಂಧಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಪ್ರಮಾಣದಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.