ಶಹಾಪುರ: ನಗರದಲ್ಲಿ ಅಕ್ರಮ ಪಡಿತರ ಅಕ್ಕಿ ಸಾಗಾಟ ನಿಲ್ಲಿಸುವಂತೆ ಪ್ರಾಂತ ರೈತ ಸಂಘದ ಪ್ರ. ಕಾರ್ಯದರ್ಶಿ ಭೀಮರಾಯ ಪೂಜಾರಿ ಒತ್ತಾಯ
Shahpur, Yadgir | Sep 17, 2025 ಅಕ್ರಮ ಪಡಿತರ ಅಕ್ಕಿ ಸಾಗಾಟವನ್ನು ತಡೆಯುವಂತೆ ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕ ಪ್ರಧಾನ ಕಾರ್ಯದರ್ಶಿ, ಭೀಮರಾಯ ಪೂಜಾರಿ ಒತ್ತಾಯಿಸಿದ್ದಾರೆ. ಬುಧವಾರ ಮಧ್ಯಾಹ್ನ ಈ ಕುರಿತು ಮಾತನಾಡಿ, ಅಕ್ರಮ ಅಕ್ಕಿ ಸಾಗಾಟ ಪ್ರಕರಣಗಳು ಯಾದಗಿರಿ ಜಿಲ್ಲೆಯಲ್ಲಿಯೇ ಹೆಚ್ಚು ನಡೆಯುತ್ತಿದ್ದು ರಾಜ್ಯದಲ್ಲಿ ಸುದ್ದಿಯಾಗಿದೆ, ಆದರೂ ಕೂಡ ಶಹಾಪುರದಲ್ಲಿ ಇನ್ನೂ ಕೂಡ ಅಕ್ರಮ ಅಕ್ಕಿ ಸಾಗಾಟ ನಿಂತಿಲ್ಲ, ಇದಕ್ಕೆ ಅಧಿಕಾರಿಗಳು ಕೂಡ ಸಹಕಾರ ನೀಡುತ್ತಿದ್ದಾರೆ ಆದ್ದರಿಂದ ಕೂಡಲೇ ಅಕ್ರಮ ಪಡಿತರ ಅಕ್ಕಿ ಸಾಗಾಟವನ್ನು ತಡೆಯುವಂತೆ ಒತ್ತಾಯಿಸಿದ್ದಾರೆ.