ಶಿರಸಿ: ರಾಜ್ಯ ಸರಕಾರದ ನಿರ್ಲಕ್ಷ್ಯ ಧೋರಣೆ ಖಂಡಿಸಿ ಬನವಾಸಿ ಗ್ರಾಪಂ ಕಚೇರಿ ಬಳಿ ಬಿಜೆಪಿಯಿಂದ ಪ್ರತಿಭಟನೆ
ಬಿಜೆಪಿ ಶಿರಸಿ ಗ್ರಾಮೀಣ ಮಂಡಲ ಹಾಗೂ ಜಿಲ್ಲಾ ರೈತ ಮೋರ್ಚಾ ವತಿಯಿಂದ ತಾಲೂಕಿನ ಬನವಾಸಿ ಗ್ರಾಪಂ ಕಚೇರಿ ಎದುರು ಬುಧವಾರ ಸಂಜೆ 4.30 ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ಅಕ್ರಮ-ಸಕ್ರಮ ಅರ್ಜಿ ತಿರಸ್ಕರಿಸಿರುವುದು, ನಿವೇಶನಗಳ ಸಮಸ್ಯೆ, ಗ್ರಾಮೀಣ ರಸ್ತೆಗಳ ದುರಸ್ತಿ, ಹೊಸ ಆಶ್ರಯ ಮನೆಗಳ ಮಂಜೂರಾತಿ, ಹಿಂದಿನ ಆಶ್ರಯ ಮನೆಗಳ ಹಣ ಬಿಡುಗಡೆ, ವೃದ್ಧಾಪ್ಯ ಮೇಲಿನ, ಸಂಧ್ಯಾ ಸುರಕ್ಷ ಪಿಂಚಣಿ ರದ್ಧತಿ, ವಿದ್ಯುತ್ ದರ ಏರಿಕೆ, ನಿರಂತರ ವಿದ್ಯುತ್ ಕೊರತೆ ಆಕ್ಷೇಪಿಸಿ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಲಾಯಿತು. ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ರಮೇಶ ನಾಯ್ಕ, ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷೆ ಉಷಾ ಹೆಗಡೆ , ಅನಂತಮೂರ್ತಿ ಹೆಗಡೆ ಇದ್ದರು