ಪಟ್ಟಣದಲ್ಲಿ ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆ ಚುನಾವಣೆಯಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬಣ ಭರ್ಜರಿ ಗೆಲುವು ಸಾಧಿಸಿದೆ. ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆ ಚುನಾವಣೆ ಮತ ಎಣಿಕೆ ಕಾರ್ಯ ಭಾನುವಾರ ಮುಕ್ತಾಯವಾಗಿದ್ದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬಣ ಭರ್ಜರಿ ಗೆಲುವು ಸಾಧಿಸಿದೆ. ಲಕ್ಷ್ಮಣ ಸವದಿ ಬೆಂಬಲಿತ 13 ಜನ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಕುಮಠಳ್ಳಿ ಹಾಗೂ ಲಕ್ಷ್ಮಣ ಸವದಿ ಬೆಂಬಲಿತ ಅಭ್ಯರ್ಥಿಗಳ ಮಧ್ಯೆ ಜಿದ್ದಾಜಿದ್ದಿ ಏರ್ಪಟ್ಟಿತ್ತು. ಕೊನೆಗೂ ಫಲಿತಾಂಶ ಪ್ರಕಟಗೊಂಡಿದ್ದು ಸವದಿ ಬಣ ಭರ್ಜರಿ ಗೆಲುವು ಸಾಧಿಸಿದೆ.