ಕೊಪ್ಪಳ: ಜಿಲ್ಲಾ ಕ್ರೀಡಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ ತಿರುಮಲೇಶ ರಾಜ್ಯಮಟ್ಟಕ್ಕೆ ಆಯ್ಕೆ
Koppal, Koppal | Sep 16, 2025 ಜಿಲ್ಲಾ ಕ್ರೀಡಾಂಗಣದಲ್ಲಿ ಕೊಪ್ಪಳ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ ಹಮ್ಮಿಕೊಳ್ಳಲಾಯಿತು. ಸೆಪ್ಟೆಂಬರ್ 16 ರಂದು ಮಧ್ಯಾಹ್ನ 2-00 ಗಂಟೆಗೆ ನಡೆದ ಸ್ಪರ್ಧೆಯಲ್ಲಿ ತಿರುಮಲೇಶ್ ಕಲ್ಲನವರ ವಿದ್ಯಾರ್ಥಿ ಅತ್ಯುತ್ತಮ ಪ್ರದರ್ಶನ ನೀಡಿ ಪದವಿ ಪೂರ್ವ ಕಾಲೇಜು ವಿಭಾಗದಲ್ಲಿ ಕರಾಟೆ ಸ್ಪರ್ಧೆಯಲ್ಲಿ, ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ . ಕರಾಟೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗೇ ಕ್ರೀಡಾ ಇಲಾಖೆಯ ಅಧಿಕಾರಿಗಳು ಅಭಿನಂದಿಸಿದ್ದಾರೆ