ಅರ್ಕಲ್ಗುಡ್: ಪಟ್ಟಣದಲ್ಲಿ ತಂಬಾಕು ಹರಾಜು ಪ್ರಕ್ರಿಯೆ ಮಾರುಕಟ್ಟೆಯಲ್ಲಿ ಸಂಸದ ಶ್ರೇಯಸ್ ಪಟೇಲ್ ಭಾಗಿ
ಅರಕಲಗೂಡು: ತಾಲೂಕಿನ ರಾಮನಾಥಪುರದ ತಂಬಾಕು ಹರಾಜು ಮಾರುಕಟ್ಟೆಯಲ್ಲೂ ದಹಿಸಿ ಗ್ರೇಡ್ ಮಾಡಿದ ತಂಬಾಕು ಮಾರಾಟ ಪ್ರಕ್ರಿಯೆ ಆರಂಭವಾಗಿದ್ದು, ಸಂಸದ ಶ್ರೇಯಸ್ ಎಂ.ಪಟೇಲ್ ಪ್ರಾರಂಭೋತ್ಸವದಲ್ಲಿ ಭಾಗಿಯಾಗಿದ್ದರು. ನಂತರ ಮಾತನಾಡಿದ ಅವರು, ಇಂದಿನಿಂದ ತಂಬಾಕು ಹರಾಜು ಪ್ರಕ್ರಿಯೆ ಆರಂಭವಾಗಿದೆ. ನಮ್ಮ ರೈತರು ವರುಣನ ಅವಕೃಪೆ, ಹಲವು ರೋಗ-ರುಜಿನಗಳ ಬಾಧೆ ನಡುವೆಯೂ ಕಷ್ಟಪಟ್ಟು ತಂಬಾಕು ಬೆಳೆದು ಅದನ್ನು ಅಣಿಗೊಳಿಸಿ ಮಾರಾಟಕ್ಕೆ ತಂದಿದ್ದಾರೆ. ಅನ್ನದಾತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಒಳ್ಳೆಯ ಬೆಲೆ ಕಲ್ಪಿಸುವ ಮೂಲಕ ಬೆಳೆಗಾರರಿಗೆ ನೆರವಾ