ಚಿಕ್ಕಮಗಳೂರು: ಅಂಬೇಡ್ಕರ್ ಭವನದ ಬಗ್ಗೆ ನಿರ್ಲಕ್ಷ್ಯ.! ಸಮಾಜ ಕಲ್ಯಾಣ ಇಲಾಖೆ ಡಿಡಿ ಕಚೇರಿಯಲ್ಲಿ ನೆಲದಲ್ಲಿ ಕೂತು ಬಿಜೆಪಿ ಎಸ್ಸಿ ಮೋರ್ಚಾ ಆಕ್ರೋಶ..!
ಅಂಬೇಡ್ಕರ್ ಭವನದ ನಿರ್ಮಾಣ ವಿಳಂಬ ಹಾಗೂ ಅದಕ್ಕೆ ತಡೆಯೋಡುತ್ತಿರುವುದನ್ನು ಖಂಡಿಸಿ ಬಿಜೆಪಿ ಎಸ್ಸಿ ಮೋರ್ಚಾ ಕಾರ್ಯಕರ್ತರು ಸಮಾಜ ಕಲ್ಯಾಣ ಇಲಾಖೆಯ ಡಿಡಿ ಕಚೇರಿಯಲ್ಲಿ ನೆಲದಲ್ಲಿ ಕೂತು ಪ್ರತಿಭಟನೆ ನಡೆಸಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ. ಬಿಜೆಪಿಯ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಕೆ ಪಿ ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.