ಮುಂಡಗೋಡ: ವರದಕ್ಷಿಣೆ ಕಿರುಕುಳ ಪ್ರಕರಣ ದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ
ಮುಂಡಗೋಡ ಮಹಿಳೆಯೊಬ್ಬರನ್ನು ಮದುವೆಯಾಗಿ ಕೆಲವೇ ತಿಂಗಳಲ್ಲಿ ವರದಕ್ಷಿಣೆ ಕಿರುಕುಳ ನೀಡಿ ಮನೆಯಿಂದ ಹೊರ ಹಾಕಿದ ಪ್ರಕರಣದಲ್ಲಿ, ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಮುಂಡಗೋಡ ಪೊಲೀಸರು ರವಿವಾರ ಬಂಧಿಸಿದ್ದಾರೆ. ಅರ್ಫಾಜ ಅಹ್ಮದ್ ಹುಸೇನ್ ಮಿರ್ಜಾನಕರ್ ಬಂಧಿತ ಆರೋಪಿಯಾಗಿದ್ದಾನೆ.ಈತನ ವಿರುದ್ಧ ಈತನ ಹೆಂಡತಿ 2022ರಲ್ಲಿ ಪೊಲೀಸ್ ದೂರು ದಾಖಲಿಸಿದ್ದರು. ಮದುವೆಯಾದ ಕೆಲವೇ ತಿಂಗಳಲ್ಲಿ ಹೆಂಡತಿಗೆ ವರದಕ್ಷಿಣೆ ಕಿರುಕುಳ ನೀಡಿ ಆಕೆಯಿಂದ ಬಂಗಾರ ಕಸಿದು ಮನೆಯಿಂದ ಹೊರ ಹಾಕಿದ ಕುರಿತು ಮುಂಡಗೋಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರಿನ ಅನ್ವಯ ಪೊಲೀಸರು ಕ್ರಮ ಕೈಗೊಂಡಿದ್ದರು.