ಇಳಕಲ್: ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸೋಣ ನಗರದಲ್ಲಿ ಶಾಸಕ ಕಾಶಪ್ಪನವರ
Ilkal, Bagalkot | Oct 26, 2025 ಬಾಗಲಕೋಟೆ ಜಿಲ್ಲೆಯ ಇಳಕಲ್ ತಹಸೀಲ್ದಾರ್ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಅ.27 ಮಧ್ಯಾಹ್ನ 2 ಗಂಟೆಗೆ ಪೂರ್ವ ಭಾವಿ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಶಾಸಕ ವಿಜಯಾನಂದ ಕಾಶಪ್ಪನವರ ವಹಿಸಿ ಮಾತನಾಡಿ ಕನ್ನಡ ರಾಜ್ಯೋತ್ಸವ ಅವಳಿ ತಾಲೂಕಿನಲ್ಲಿ ಅದ್ದೂರಿಯಾಗಿ ಆಚರಿಸುವಂತೆ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಬಂಧ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ತಹಸೀಲ್ದಾರ್ ಅಮರೇಶ ಪಮ್ಮಾರ, ನಗರಸಭೆ ಪೌರಾಯುಕ್ತ ಶ್ರೀನಿವಾಸ ಜಾಧವ, ನಗರಸಭೆ ಅಧ್ಯಕ್ಷೆ ಸುಧಾರಾಣಿ ಸಂಗಮ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು