ಕೃಷ್ಣರಾಜಪೇಟೆ: ಪಟ್ಟಣದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಬಿಗಿ ಪೊಲೀಸ್ ಭದ್ರತೆ
ಕೆ. ಆರ್. ಪೇಟೆ ಪಟ್ಟಣದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ. ಕೆ.ಆರ್.ಪೇಟೆ ಪಟ್ಟಣದಲ್ಲಿ ಹಿಂದೂ ಮಹಾ ಸಭಾದ ಗಣಪತಿ ವಿಸರ್ಜನೆ ಹಿನ್ನೆಲೆಯಲ್ಲಿ ಪೊಲೀಸರು ಹೈ ಅಲಟರ್್ ಘೋಷಿಸಿದ್ದಾರೆ. ಮೆರವಣಿಗೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಪಟ್ಟಣದಾದ್ಯಂತ ಖಾಕಿ ಕಣ್ಣಾವಲು ಹಾಕಲಾಗಿದ್ದು, ಮೆರವಣಿಗೆಯ ಮೇಲೆ ಹದ್ದಿನ ಕಣ್ಣಿಡಲಾಗಿದೆ. ಮಸೀದಿ, ಪ್ರಮುಖ ವೃತ್ತಗಳು ಮತ್ತು ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ತುಕಡಿಗಳನ್ನು ನಿಯೋಜಿಸಲಾಗಿದೆ. ಮದ್ದೂರು ಗಲಭೆ ಪ್ರಕರಣದ ಬಳಿಕ ಜಿಲ್ಲಾ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದ್ದಾರೆ.