ಬಬಲೇಶ್ವರ: ಪಟ್ಟಣದ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್ ಗಳ ಪೆರೇಡ್ ನಡೆಸಿದ ಪೊಲೀಸ್ ಅಧಿಕಾರಿಗಳು
ವಿಜಯಪುರ ಜಿಲ್ಲೆಯ ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಬುಧವಾರ ಸಾಯಂಕಾಲ 6ಗಂಟೆ ಸುಮಾರಿಗೆ ಪೊಲೀಸ್ ಅಧಿಕಾರಿಗಳು ರೌಡಿಶೀಟರ್ ಪರೇಡ್ ನಡೆಸಿದರು. ರೌಡಿಶೀಟರ್ ಗಳನ್ನು ಪೊಲೀಸ್ ಠಾಣೆಗೆ ಕರೆದು ಖಡಕ್ ಎಚ್ಚರಿಕೆ ನೀಡಿದರು. ಪಟ್ಟಣದಲ್ಲಿ ಯಾವುದೇ ಅಹಿತಕರ ಘಟನೆಯಲ್ಲಿ ಭಾಗಿಯಾದರೆ ನಿಮ್ಮ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಸಾರ್ವಜನಿಕ ಜೀವನದಲ್ಲಿ ನೆಮ್ಮದಿಯಿಂದ ಜೀವನ ನಡೆಸಬೇಕು ಯಾವುದೇ ಬಾಲ ಬಿಚ್ಚಿದರೆ ಕಟ್ ಮಾಡುತ್ತೇವೆ ಎಂದು ಪೊಲೀಸರು ರೌಡಿಶೀಟರ್ ಗಳಿಗೆ ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.