ತಾಲೂಕಿನ ಹಗರಿ (ವೇದಾವತಿ) ನದಿಯಲ್ಲಿ ಮಂಗಳವಾರ ಈಜಲು ಹೋಗಿ ಇಬ್ಬರು ಬಾಲಕರ ಸುಳಿವು ಎರಡು ದಿನವಾದರೂ ಇನ್ನೂ ಪತ್ತೆಯಾಗಿಲ್ಲ. ಮಂಗಳವಾರ ಮಧ್ಯಾಹ್ನ ನದಿಯಲ್ಲಿ ಈಜಲು ತೆರಳಿದ್ದ ವಿಷ್ಣುಸಾಯಿ (14), ಕಿರಣ್ ( 16) ನೀರಿನ ಸೆಳೆತಕ್ಕೆ ಸಿಕ್ಕು ಕೊಚ್ಚಿಕೊಂಡು ಹೋಗಿದ್ದರು. ಮೊದಲಿಗೆ ನದಿ ದಡದಲ್ಲಿ ಈಜಾಡುತ್ತಿದ್ದ ಬಾಲಕರು, ಬಳಿಕ ಮಧ್ಯಕ್ಕೆ ಹೋಗಿದ್ದು, ರಭಸವಾಗಿ ಹರಿಯುತ್ತಿದ್ದ ನದಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ ಎಂದು ಪಿಡಿಹಳ್ಳಿ ಪೊಲೀಸ್ ಠಾಣೆ ಅಧಿಕಾರಿಗಳು ತಿಳಿಸಿದರು. ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಗೃಹರಕ್ಷಕದಳ ಮಂಗಳವಾರವೇ ರಕ್ಷಣಾ ಕಾರ್ಯ ಆರಂಭಿಸಿದ್ದರು. ಸಂಜೆಯಾಗುತ್ತಲೇ ಕಾರ್ಯಚರಣೆ ಸ್ಥಗಿತಗೊಳಿಸಿ, ಬುಧವಾರಕ್ಕೆ