ಶಿರಾ: ನಗರದದಲ್ಲಿ ತಾಲೂಕು ಕುಂಬಾರರ ಸಂಘದ ಸರ್ವ ಸದಸ್ಯರ ಸಭೆ :ಪ್ರತಿಭಾ ಪುರಸ್ಕಾರ, ನಿವೃತ್ತ ನೌಕರರಿಗೆ ಸನ್ಮಾನ ಕಾರ್ಯಕ್ರಮ
Sira, Tumakuru | Sep 14, 2025 ಶಿರಾ ನಗರದ ಅಂಬೇಡ್ಕರ್ ಭವನದಲ್ಲಿ ತಾಲೂಕು ಕುಂಬಾರರ ಸಂಘ ವತಿಯಿಂದ 2024-25 ನೇ ಸಾಲಿನ ಸರ್ವ ಸದಸ್ಯರ ಸಭೆ, ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಭಾನುವಾರ ಮಧ್ಯಾಹ್ನ 12.30 ರ ಸಮಯದಲ್ಲಿ ನಡೆದ ಈ ಸಮಾರಂಭವನ್ನು ಜಿಲ್ಲಾ ಕುಂಬಾರರ ಸಂಘದ ಅಧ್ಯಕ್ಷ ಶ್ರೀನಿವಾಸ್ ಉದ್ಘಾಟಿಸಿದರು. ಕುಂಬಾರ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವನ್ನ ಮುಖಂಡ ವೈ. ಜಿ. ಶ್ರೀನಾಥ್ ನಡೆಸಿ ಕೊಟ್ಟರುಇದೇ ಸಂದರ್ಭದಲ್ಲಿ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಕುಂಬಾರ ಸಮುದಾಯದ ನಿವೃತ್ತ ನೌಕರರಿಗೆ ಸನ್ಮಾನ ಕಾರ್ಯಕ್ರಮ ನೆರವೇರಿತು.